ಇತರೆ

ಕೋಟ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ, ಓರ್ವ ವಶಕ್ಕೆ…!

Views: 156

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಕೋಟ ಸಮೀಪ ವ್ಯಕ್ತಿಯೋರ್ವ ರಿಕ್ಷಾದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವಾಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ರಾಜೇಶ್ ಎಂದು ಗುರುತಿಸಲಾಗಿದೆ.

ಅನ್ನ ಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ, ರಿಕ್ಷಾದಲ್ಲಿ ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಪಡಿತರ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಸಿಗುವ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವುದು ದೃಢಪಡಿಸಿಕೊಂಡು ರಿಕ್ಷಾದಲ್ಲಿದ್ದ ಒಟ್ಟು 7 ಚೀಲದಲ್ಲಿ ಸಂಗ್ರಹಿಸಿದ್ದ 274.34 Kg ಅಕ್ಕಿ ಸ್ವಾಧೀನಪಡಿಸಿಕೊಂಡಿದ್ದಾರೆ.ಕೋಟ ಪೊಲೀಸ್ ಠಾಣೆಯಲ್ಲಿತ ಪ್ರಕರಣ ದಾಖಲಾಗಿದೆ

Related Articles

Back to top button