ಜಾತಿ ಗಣತಿ ಮೂರ್ಖತನದ ಸಮೀಕ್ಷೆ, ಸಮಾಜವನ್ನು ಒಡೆಯುವ ಹುನ್ನಾರ ಇದು ಕೂಡಲೇ ಕೈಬಿಡಿ: ಯತ್ನಾಳ್ ಆಗ್ರಹ

Views: 18
ಕನ್ನಡ ಕರಾವಳಿ ಸುದ್ದಿ: ರಾಜ್ಯ ಸರ್ಕಾರ ನಡೆಸಲು ಮುಂದಾಗಿರುವ ಜಾತಿ ಗಣತಿ ಮೂರ್ಖ, ಅಯೋಗ್ಯತನದ ಸಮೀಕ್ಷೆ ಯಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಇದನ್ನು ಕೈಬಿಡಬೇಕು ಎಂದು ಬಿಜೆಪಿಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಗಣತಿಯ ಮಾದರಿ ರೂಪಿಸಿದವರನ್ನು ಕಪಾಳಕ್ಕೆ ಹೊಡೆಯಬೇಕು. ವ್ಯವಸ್ಥಿತವಾಗಿ ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೀರಶೈವ-ಲಿಂಗಾಯತ ಎರಡೂ ಒಂದೇ. ಇವು ಹಿಂದೂ ಧರ್ಮದ ಭಾಗ. ವೀರಶೈವ, ಲಿಂಗಾಯತ ಅಧಿಕೃತ ಧರ್ಮವಲ್ಲ. ಅದಕ್ಕೆ ಕೇಂದ್ರ ಸರ್ಕಾರದಿಂದ ಮಾನ್ಯತೆಯೂ ಸಿಕ್ಕಿಲ್ಲ. ಹೀಗಾಗಿ ಲಿಂಗಾಯತ ಸಮುದಾಯದವರು ಜಾತಿ ಸಮೀಕ್ಷೆ ಸಂದರ್ಭದಲ್ಲಿ ಧರ್ಮ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಎಂದು ವಿನಂತಿಸಿದರು. ಹಿಂದೂ ಧರ್ಮ ಬೇಡ ಎನ್ನುವ ಸ್ವಾಮೀಜಿಗಳು ಕೇಸರಿ ಬಟ್ಟೆ ತ್ಯಾಗ ಮಾಡಿ, ಹಸಿರು, ಬಿಳಿ ಬಟ್ಟೆ ಧರಿಸಲಿ. ಹಿಂದೂ ಧಾರ್ಮಿಕ ಸಂಪ್ರದಾಯಗಳಿಗೆ ಅಪಮಾನ ಮಾಡುವುದು ಸ್ವಾಮೀಜಿಗಳ ಉದ್ದೇಶ ಎಂದು ಕಿಡಿಕಾರಿದರು.
ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಸ್ವಯಂ ಆಗಿ ಪ್ರಕರಣ ದಾಖಲಿಸುತ್ತಾರೆ. ಯಾರನ್ನೋ ಖುಷಿ ಪಡಿಸಲಿಕ್ಕೆ ಅಧಿಕಾರಿಗಳು ಕೆಲಸ ಮಾಡಬಾರದು ಎಂದು ಆಗ್ರಹಿಸಿದರು. ಗಣಪತಿ ಡಿಜೆ ಹಚ್ಚಿದಕ್ಕೆ, ಸಭೆಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್ ದಾಖಲು ಮಾಡುತ್ತಾರೆ. ಬರುವ 2028ಕ್ಕೆ ರಾಜ್ಯದಲ್ಲಿ ಹಿಂದೂಗಳ ಪರವಾದ ಜೆಸಿಬಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹಿಂದೂಗಳ ಮೇಲೆ ದಾಖಲಾದ ಪ್ರಕರಣ ವಾಪಸ್ ಪಡೆಯೋದೇ ಮೊದಲ ಕೆಲಸ ಎಂದರು. ಸನಾತನ ಧರ್ಮದಲ್ಲಿ ಮೂರ್ತಿ ಪೂಜೆ ಮಾಡುವ ಅಧಿಕಾರ ದಲಿತ ಮಹಿಳೆಯರಿಗೂ ಇದೆ ಎಂದು ನಾನು ಹೇಳಿಕೆ ನೀಡಿದ್ದರೆ, ನನ್ನ ಹೇಳಿಕೆಯನ್ನು ಕೆಲವು ಶಾಸಕರು ತಿರುಚಿದ್ದಾರೆ.