ಇತರೆ

ಉಡುಪಿ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಸೆರೆ

Views: 140

ಕನ್ನಡ ಕರಾವಳಿ ಸುದ್ದಿ : ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್‌ಮೆಂಟ್‌ನಲ್ಲಿ  ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 18ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್‌ಮೆಂಟ್‌ 17ನೇ ಮಹಡಿಯ ಫ್ಲಾಟ್ ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ ಎಂಬಾತನನ್ನು ಬಂಧಿಸಿದ್ದಾರೆ.

ಆತನಿಂದ 2.105 ಕೆಜಿ (₹60,000 ಮೌಲ್ಯ) ಗಾಂಜಾ, ಹುಕ್ಕಾ, ಡಿಜಿಟಲ್ ಸ್ಕೇಲ್ ಹಾಗೂ ₹75,000 ಮೌಲ್ಯದ ಐಫೋನ್ ಸ್ವಾಧೀನಪಡಿಸಿಕೊಂಡಿದ್ದಾರೆ.

ಮುಂದಿನ ತನಿಖೆಯಲ್ಲಿ ಇನ್ನೋರ್ವ ಆರೋಪಿ ಆರ್ಯನ್ ಚಗಪ್ಪನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದ್ದು, ಅವನ ಸ್ಕೂಟಿ (KA 20 EX 7595)ಯಿಂದ 627 ಗ್ರಾಂ (₹20,000 ಮೌಲ್ಯದ) ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ಇಬ್ಬರೂ ಮಣಿಪಾಲದ ಪ್ರತಿಷ್ಠಿತ ಕಾಲೇಜಿನ ಬಿಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳು. ಮಾದಕ ವ್ಯಸನಿಗಳಾಗಿರುವ ಇವರು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರೆಂಬುದು ತನಿಖೆಯಿಂದ ಬಹಿರಂಗವಾಗಿದೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!