ಪ್ರೀತಿಗೆ ವಿರೋಧ, ಪ್ರೇಮಿಗಳಿಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನ: ಯುವತಿ ನಿರುಪಾಲು, ಯುವಕ ಬಚಾವು
Views: 126
ಕನ್ನಡ ಕರಾವಳಿ ಸುದ್ದಿ: ಮನೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಪ್ರೇಮಿಗಳಿಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಯವಕ ಪ್ರಾಣಾಪಾಯದಿಂದ ಪಾರಾಗಿ, ಯುವತಿ ನೀರು ಪಾಲಾದ ಘಟನೆ ಶಿವಮೊಗ್ಗದ ಭದ್ರಾವತಿ ತಾಲ್ಲೂಕಿನ ಅಂತರಗಂಗೆಯಲ್ಲಿ ನಡೆದಿದೆ.
ಭೋವಿ ಕಾಲೋನಿ ನಿವಾಸಿ ಸ್ವಾತಿ (19) ಯುವತಿ ನೀರುಪಾಲಾದ ಯುವತಿ. ಸೂರ್ಯ (20) ಬದುಕುಳಿದ ಯುವಕ
ಇಬ್ಬರು ನೆರೆಹೊರೆ ನಿವಾಸಿಗಳಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿ ವಿಚಾರ ಮನೆಯವರಿಗೆ ಗೊತ್ತಾಗಿದೆ. ಆಗ ಇಬ್ಬರಿಗೂ ಬುದ್ದಿವಾದ ಹೇಳಿದ್ದಾರೆ.
ಮನ ನೊಂದ ಈ ಜೋಡಿ ಇರುವೆ ಕ್ರಿಮಿನಾಶಕ ಸೇವಿಸಿ ಬಳಿಕ ಅಂತರಗಂಗೆಯ ಉಕ್ಕುಂದದಲ್ಲಿರುವ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂದರ್ಭ ಸೂರ್ಯ ಮರದ ದಿಮ್ಮಿಯ ಸಹಾಯದಿಂದ ಪಾರಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ವಾತಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾಳೆ.
ಸ್ವಾತಿ ನೀರುಪಾಲಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.






