ಸಾಂಸ್ಕೃತಿಕ

ಕನ್ನಡದ ಹಿರಿಯ ಸಾಹಿತಿ ಎಸ್ಎಲ್ ಬೈರಪ್ಪ ಇನ್ನಿಲ್ಲ

Views: 80

ಕನ್ನಡ ಕರಾವಳಿ ಸುದ್ದಿ:ನಾಡಿನ ಹಿರಿಯ ಸಾಹಿತಿ ಎಸ್ಎಲ್ ಬೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಬೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದರು. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು.

ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು.

ಆದರೇ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್‌.ಎಲ್. ಬೈರಪ್ಪ ಅವರ ಪೂರ್ಣ ಹೆಸರು.

ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ.

ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ.

ಬೈರಪ್ಪ ಅವರಿಗೆ ಬಂದ ಪದವಿಗಳು ಮತ್ತು ಪ್ರಶಸ್ತಿಗಳು ಅಂದರೇ, ಭೈರಪ್ಪ ಅವರಿಗೆ 2010ರಲ್ಲಿ ಸರಸ್ವತಿ ಸಮ್ಮಾನ್, 2015ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್, 2016ರಲ್ಲಿ ಪದ್ಮಶ್ರೀ, ಮತ್ತು 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗಳು ಲಭಿಸಿವೆ.

 

Related Articles

Back to top button
error: Content is protected !!