ಸಾಂಸ್ಕೃತಿಕ

ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ

Views: 136

ಕನ್ನಡ ಕರಾವಳಿ ಸುದ್ದಿ: ಖ್ಯಾತ ಕನ್ನಡ ರಂಗಭೂಮಿ ನಟ, ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಜನಪ್ರಿಯರಾಗಿದ್ದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಯಶವಂತ ಸರದೇಶಪಾಂಡೆ ಅವರಿಗೆ ಬೆಳಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಯಿತು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.

ಅವರ ನಿಧನಕ್ಕೆ ಕುಟುಂಬ ವರ್ಗ, ಅವರ ಅಭಿಮಾನಿಗಳು, ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

Related Articles

Back to top button
error: Content is protected !!