ಶಿಕ್ಷಣ

ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಮಹಾತ್ಮಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನಾಚರಣೆ

Views: 145

ಕನ್ನಡ ಕರಾವಳಿ ಸುದ್ದಿ:ಶಿರೂರು ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿಯವರ 156 ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ 121 ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಮಹಾನ್ ನಾಯಕರ ಉದಾತ್ತ ವಿಚಾರದಾರೆಗಳನ್ನು ತಿಳಿಸಿ ಎಲ್ಲರಿಗೂ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜನ್ಮದಿನದ ಶುಭಾಶಯ ತಿಳಿಸಿದರು.

Related Articles

Back to top button
error: Content is protected !!