ಇತರೆ

ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಕೆಳಗೆ ಮಹಿಳೆಯ ಶವ ಪತ್ತೆ!

Views: 87

ಕನ್ನಡ ಕರಾವಳಿ ಸುದ್ದಿ : ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಜೋಯಿಡಾ ತಾಲೂಕಿನ ತೀನೈಘಾಟ್ ನಲ್ಲಿ ಸೇತುವೆಯ ಕೆಳಗೆ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿರುವ ಬಗ್ಗೆ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.

ಮೃತ ಮಹಿಳೆ ನಂದಗಡದ ದುರ್ಗಾ ನಗರ ನಿವಾಸಿ ಅಶ್ವಿನಿ ಬಾಬುರಾವ ಪಾಟೀಲ ಎಂದು ತಿಳಿದು ಬಂದಿದೆ. ಮೃತ ಮಹಿಳೆಯು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಈ ಘಟನೆಗೆ ಕಾರಣ ಏನಿರಬಹುದು ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

.

Related Articles

Back to top button
error: Content is protected !!