ಬಸ್ರೂರು ಶ್ರೀ ಶಾರದಾ ಕಾಲೇಜು:ಡಾl ಕೆ.ಶಿವರಾಮ ಕಾರಂತರ ಜನ್ಮದಿನದ ಪ್ರಯುಕ್ತ ವಿಶೇಷ ಉಪನ್ಯಾಸ

Views: 44
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಕನ್ನಡ ವಿಭಾಗ ಮತ್ತು ಸಾಹಿತ್ಯ ಸಂಘ ಇವುಗಳ ಆಶ್ರಯದಲ್ಲಿ ಡಾ.ಕೆ. ಶಿವರಾಮ ಕಾರಂತರ ಜನ್ಮದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಹಾಗೂ ವಿದ್ಯಾರ್ಥಿಗಳಿಂದ ಪ್ರಬಂಧ ಮಂಡನೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಡಾ. ರೇಖಾ ವಿ ಬನ್ನಾಡಿ, ನಿವೃತ್ತ ಕನ್ನಡ ಪ್ರಾಧ್ಯಾಪಕರು ಭಾಗವಹಿಸಿ ಶಿವರಾಮ ಕಾರಂತರ ಕಾದಂಬರಿಗಳ ಮೇಲೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ್ ಕೆ ಎನ್ ,ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ,ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀ ಕುಮಾರ್ ಪಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ಶಾರದಾ ವಾಣಿ ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳು ಶಿವರಾಮ ಕಾರಂತರ ಕಾದಂಬರಿಗಳ ಮೇಲೆ ಪ್ರಬಂಧ ಮಂಡನೆ ನಡೆಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಕುಮಾರಿ ಮಮತಾ ನಿರೂಪಿಸಿ, ಶ್ರೀಮತಿ ಪ್ರಮೀಳಾ ವಂದಿಸಿದರು.