ರಾಜಕೀಯ

ವಿಪಕ್ಷ ನಾಯಕನ ಆಯ್ಕೆ: ಶಾಸಕರೊಂದಿಗೆ ಸಭೆ ನಡೆಸಲಿರುವ ಬಿಜೆಪಿ ವರಿಷ್ಠರು, ಬೊಮ್ಮಾಯಿ, ಯತ್ನಾಳ್ ನಡುವೆ ಪೈಪೋಟಿ

Views: 1

ಬೆಂಗಳೂರು: ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವಿಪಕ್ಷ ನಾಯಕನ ಆಯ್ಕೆ ಬಿಜೆಪಿಗೆ ಕಗ್ಗಾಂಟಾಗಿದೆ

ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದು, ರಾಜ್ಯದ ಪರಿಸ್ಥಿತಿಗಳನ್ನು ವಿವರಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ವಿನೋದ್ ತಾವ್ಡೆ, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಬೆಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಲಿದ್ದು, ಮಂಗಳವಾರ ಪಕ್ಷದ 66 ಶಾಸಕರೊಂದಿಗೆ ಪ್ರತ್ಯೇಕ ಸಭೆ ಚರ್ಚೆ ನಡೆಸಿ ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಸಂಬಂಧಿಸಿದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಆ ಬಳಿಕ ವಿಪಕ್ಷ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಯಲಾಗಿದೆ.

ಯಡಿಯೂರಪ್ಪ ಅವರು ಮಾಜಿ ಕೇಂದ್ರ ಸಚಿವ ಬಸವನ ಗೌಡ ಪಾಟೀಲ್ ಯತ್ನಾಳ್ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಣೆ ಅನಿವಾರ್ಯವಾಗಿದೆ.

ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕನ ಹುದ್ದೆ ರೇಸ್ನಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಯತ್ನಾಳ್ ನಡುವೆ ತೀವ್ರ ಪೈಪೋಟಿ ನಡೆದಿದೆ.

Related Articles

Back to top button
error: Content is protected !!