ಯುವಜನ
ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಎಂಬಿಬಿಎಸ್ ವಿದ್ಯಾರ್ಥಿನಿ, ಆಸ್ಪತ್ರೆಗೆ ಸಾಗಿಸುವಾಗ ಕಾರು ಅಪಘಾತವಾಗಿ ಸಾವು
Views: 303
ಕನ್ನಡ ಕರಾವಳಿ ಸುದ್ದಿ: ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಳು. ತಕ್ಷಣ ಆಕೆಯ ಸಹೋದರ ಆಕೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿ, ಆಕೆ ಸಾವನ್ನಪ್ಪಿದ್ದಾಳೆ.
ಸಹೋದರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಘಟನೆ ನಡೆದಿರೋದು ಬೆಳಿಗ್ಗೆ ಕಾಸರಗೋಡು ಜಿಲ್ಲೆಯ ಬೇತೂರು ಪಾರ ಸಮೀಪ. ತಚ್ಚಾರ್ ಕುಂಡುವಿನ 19 ವರ್ಷದ ಮಹಿಮಾ ಮೃತಪಟ್ಟ ವಿದ್ಯಾರ್ಥಿನಿ.
ಮಹೇಶ್ ಗಾಯಗೊಂಡ ಸಹೋದರ. ಮನೆಯಿಂದ ಒಂದು ಕಿ.ಮೀ ಅಂತರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಮಹಿಮಾ ಆಗಲೇ ಮೃತಪಟ್ಟಿದ್ದರು. ಮಹೇಶ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿದ್ಯಾರ್ಥಿನಿ ನೇಣು ಬಿಗಿದ ಹಾಗೂ ಅಪಘಾತದ ಬಗ್ಗೆ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.






