ಇತರೆ

ಬೈಂದೂರು: ಬೊಲೆರೋ ಪಿಕಪ್ ವಾಹನ- ರಿಕ್ಷಾಕ್ಕೆ ಡಿಕ್ಕಿ; ಆಟೋ ಚಾಲಕ ಸಾವು

Views: 101

ಕನ್ನಡ ಕರಾವಳಿ ಸುದ್ದಿ : ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ಸಂಭವಿಸಿದೆ.

ಮೃತಪಟ್ಟ ಆಟೋ ಚಾಲಕ ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಎಂದು ಗುರುತಿಸಲಾಗಿದೆ.

ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ನಜ್ಜುನುಜ್ಜಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಿಕಪ್ ವಾಹನ ಅತೀ ವೇಗದ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!