ಶಿಕ್ಷಣ

9ನೇ ತರಗತಿ ವಿದ್ಯಾರ್ಥಿ ಶಾಲೆಗೆ ಗೈರಾಗಿದ್ದಕ್ಕೆ ಶಿಕ್ಷಕಿ, ಪ್ರಾಂಶುಪಾಲರು ಮನಬಂದಂತೆ ಹೊಡೆದು ವಿದ್ಯಾರ್ಥಿ ಗಂಭೀರ

Views: 157

ಕನ್ನಡ ಕರಾವಳಿ ಸುದ್ದಿ: 9ನೇ ತರಗತಿ ವಿದ್ಯಾರ್ಥಿಗೆ ಶಾಲೆಯ ಶಿಕ್ಷಕಿ ಹಾಗೂ ಪ್ರಾಂಶುಪಾಲರು ಪಿವಿಸಿ ಪೈಪ್ ನಲ್ಲಿ ಬಾಸುಂಡೆ ಬರುವಂತೆ ಹೊಡೆದಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸುಂಕದಕಟ್ಟೆ ಬಳಿ ಇರುವ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಗೈರಾಗಿದ್ದಕ್ಕೆ ಮಾರನೆ ದಿನ ಶಾಲೆಗೆ ಬಂದ ವಿದ್ಯಾರ್ಥಿ ಮೇಲೆ ಶಿಕ್ಷಕಿ ಹಾಗೂ ಪ್ರಾಂಶುಪಾಲರು ಮನಬಂದಂತೆ ಹೊಡೆದಿದ್ದಾರೆ. ಪಿವಿಸಿ ಪೈಪ್ ನಿಂದ ಹೊಡೆದಿದ್ದು, ವಿದ್ಯಾರ್ಥಿ ಮೈಮೇಲೆ ಬಾಸುಂಡೆಗಳು ಬಂದಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Related Articles

Back to top button
error: Content is protected !!