ಯುವಜನ

ಹಾಸನಾಂಬೆ ದರ್ಶನ ಮುಗಿಸಿ ಮರಳುತ್ತಿದ್ದ ವೇಳೆ ಬೈಕ್‌ಗೆ  ಕಾರು ಡಿಕ್ಕಿ: ಯುವಕ, ಯುವತಿ ಸ್ಥಳದಲ್ಲೇ ಸಾವು

Views: 102

ಕನ್ನಡ ಕರಾವಳಿ ಸುದ್ದಿ: ಹಾಸನಾಂಬೆ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕ, ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.

ಹಾಸನಾಂಬ ದೇವಿ ದರ್ಶನ ಮುಗಿಸಿ ಬೈಕ್‌ನಲ್ಲಿ  ತೆರಳುತ್ತಿದ್ದ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು(24) ಹಾಗೂ ಅನುಶ್ರೀ(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!