ಆರ್ಥಿಕ

ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ “ಬ್ಯಾಂಕ್ ವ್ಯವಹಾರದಲ್ಲಿ ಜಾಗೃತಿ” ಕಾರ್ಯಾಗಾರ

Views: 72

ಕನ್ನಡ ಕರಾವಳಿ ಸುದ್ದಿ:ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರಗಳು ಡಿಜಿಟಲ್ ವ್ಯವಸ್ಥೆಯ ಅಡಿಯಲ್ಲಿ ನಡೆಯುತ್ತಿದ್ದು ಗ್ರಾಹಕನು ಅತ್ಯಂತ ಜಾಗರೂಕನಾಗಿ ಬ್ಯಾಂಕಿಂಗ್ ವ್ಯವಹಾರ ನಡೆಸದೇ ಇದ್ದ ಪಕ್ಷದಲ್ಲಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಾನೆ. ಹಾಗಾಗಿ ಎಚ್ಚೆತ್ತ ಗ್ರಾಹಕ ಗುರಿಯತ್ತ ಸಾಗುವನೆಂದು ನಿವೃತ್ತ ಬ್ಯಾಂಕ್ ಅಧಿಕಾರಿ ವಿ. ಮೊಹನ್ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ ನುಡಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿ ನಡೆದ ಬ್ಯಾಂಕ್ ವ್ಯವಹಾರದಲ್ಲಿ ಜಾಗೃತೆ ಕಾರ್ಯಾಗಾರವನ್ನು ಉದ್ದೇಶಿಸಿ ಈ ಮಾತುಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಇವರು ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕನು ನೈಪುಣ್ಯತೆಯೊಂದಿಗೆ ವ್ಯವಹರಿಸದಿಲ್ಲಿ ಮೋಸದ ಬಲೆಗೆ ಬೀಳದೆ ಇರಲು ಸಾಧ್ಯ ಎಂದು ನುಡಿದರು. ವಾಣಿಜ್ಯ ಶಾಸ್ತ್ರ ಮುಖ್ಯಸ್ಥರಾದ ಡಾ. ಶೇಖರ ಬಿ. ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Back to top button