ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ದೀಪಾವಳಿ ಹಬ್ಬ ಆಚರಣೆ
Views: 117
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನು ಅತ್ಯಂತ ಭಕ್ತಿ ಭಾವದಿಂದ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು.

ಪ್ರಥಮವಾಗಿ ಲಕ್ಷ್ಮೀ ಪೂಜೆಯನ್ನು ಶಾಲಾ ಸಂಚಾಲಕರಾದ ಶ್ರೀ ಸಂತೋಷ್ ಶೆಟ್ಟಿ ಹಾಗೂ ಶ್ರೀಮತಿ ಆಶಾ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಸಲಾಯಿತು.
ದೀಪಾವಳಿ ಹಬ್ಬದ ಅಂಗವಾಗಿ ಶಾಲೆಯಲ್ಲಿ ಸ್ಕ್ವಾರ್ಡ್ ವಾಯಸ್ ವಿಭಾಗದಲ್ಲಿ ರಂಗೋಲಿ ಹೂವಿನ ರಂಗೋಲಿ, ಗ್ರೀಟಿಂಗ್ ಕಾರ್ಡ್ ತಯಾರಿಕೆ ,ಮಣ್ಣಿನಿಂದ ದೀಪ ತಯಾರಿಕೆ, ಗೂಡು ದೀಪ ತಯಾರಿಕೆ, ತರಗತಿ ಕೋಣೆ ಅಲಂಕಾರ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ವಿದ್ಯಾರ್ಥಿಗಳು ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿ ಬಣ್ಣಗಳ ಲೋಕದಲ್ಲಿ ಅದ್ಭುತ ವಿನ್ಯಾಸಗಳನ್ನು ಸೃಷ್ಟಿಸಿದರು. ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಆಶಾ ಪಿ, ಭವ್ಯರಮೇಶ್ ಆಗಮಿಸಿದ್ದರು.ಎಲ್ಲ ವಿದ್ಯಾರ್ಥಿಗಳು ಸಾಂಸ್ಕೃತಿಕ ಉಡುಪುಗಳನ್ನು ಧರಿಸಿ ಹಬ್ಬದ ಕಳೆಯನ್ನು ಇನ್ನಷ್ಟು ಹೆಚ್ಚಿಸಿದರು.
ಆಚರಣೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇಷ್ಮಾ ಅಡಪ ಹಾಗೂ ಶಿಕ್ಷಕ, ಶಿಕ್ಷಕೇತರ ವ್ರಂದದವರು ಉಪಸ್ಥಿತರಿದ್ದರು.






