ಪಾರ್ಸೆಲ್ ಬಂದಿರುವ ವಿದೇಶಿ ಕಂಪನಿಗಳ ಬಿಸ್ಕೆಟ್, ಚಾಕೊಲೇಟ್ ಪ್ಯಾಕೇಟ್‌ಗಳಲ್ಲಿ ಕೊಟ್ಯಾಂತರ ಮೌಲ್ಯದ ಡ್ರಗ್ಸ್, ಹೈಡ್ರೋ ಗಾಂಜಾ ವಶಕ್ಕೆ
Views: 52
ಕನ್ನಡ ಕರಾವಳಿ ಸುದ್ದಿ: ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಟ್ಟು 5.50 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಹಾಗೂ 42 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಈ ಇಬ್ಬರು ವಿದೇಶಿ ಪ್ರಜೆಗಳು ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿರುವುದು ವಿಚಾರಣೆಯಿಂದ ತಿಳಿದು ಬಂದಿದ್ದು, ಇವರಿಂದ 42,800 ನಗದು ಸೇರಿದಂತೆ 2.50 ಕೋಟಿ ರೂ. ಮೌಲ್ಯದ 1.47 ಕೆಜಿ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಬಿಸ್ಕೆಟ್, ಚಾಕೊಲೇಟ್ ಪ್ಯಾಕೇಟ್‌ನಲ್ಲಿ ಡ್ರಗ್ಸ್ ಕೆಜಿನಗರ ಠಾಣಾ ವ್ಯಾಪ್ತಿಯಲ್ಲಿರುವ ವಿದೇಶಿ ಅಂಚೆ ಕಚೇರಿಗೆ ಥೈಲ್ಯಾಂಡ್ ದೇಶದಿಂದ ಬಿಸ್ಕೆಟ್, ಚಾಕೊಲೇಟ್ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್ ಪಾರ್ಸೆಲ್‌ನಲ್ಲಿ ಬಂದಿರುವುದನ್ನು ಪತ್ತೆ ಹಚ್ಚಿ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಈ ವಿದೇಶಿ ಅಂಚೆ ಕಚೇರಿಗೆ ಅನುಮಾನಾಸ್ಪದ ಪಾರ್ಸೆಲ್‌ಗಳು ಬಂದಿರುವ ಬಗ್ಗೆ ಸಿಸಿಬಿ ಹಾಗೂ ಕಸ್ಟಮ್ಸ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರೆತಿವೆ. ತಕ್ಷಣ ಸಿಸಿಬಿ ತಂಡ ಶ್ವಾನದಳದೊಂದಿಗೆ ವಿದೇಶಿ ಅಂಚೆ ಕಚೇರಿಗೆ ದಾವಿಸಿ ಪಾರ್ಸೆಲ್‌ಗಳನ್ನು ಪರಿಶೀಲಿಸಿದಾಗ, ವಿದೇಶಿ ಕಂಪನಿಗಳ ಬಿಸ್ಕೆಟ್, ಚಾಕೊಲೇಟ್ ಪ್ಯಾಕೇಟ್‌ಗಳಲ್ಲಿ ಡ್ರಗ್ಸ್ ಮರೆಮಾಚಿ ಆಮದು ಮಾಡಿಕೊಂಡಿರುವುದು ಪತ್ತೆಯಾಗಿದ್ದು, ಸುಮಾರು 3 ಕೋಟಿ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದೆ.
ಈ ಬಗ್ಗೆ ಕೆಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಾರ್ಸೆಲ್ ಕಳುಹಿಸಿದವರ ಪತ್ತೆ ಕಾರ್ಯ ಮುಂದುರೆದಿದೆ.ಸಿಸಿಬಿ ಎಸಿಪಿ ಮಹಾನಂದ್ ಮತ್ತು ಇನ್‌್ಸಪೆಕ್ಟರ್‌ಗಳಾದ ಶಿವರಾಜು, ರಕ್ಷಿತ್ ಮತ್ತು ಸಿಬ್ಬಂದಿ ತಂಡ ಯಶಸ್ವಿಯಾಗಿ ಈ ಕಾರ್ಯಾಚರಣೆ ನಡೆಸಿದೆ.






