ಇತರೆ
		
	
	
ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ !
 
						Views: 123
ಕನ್ನಡ ಕರಾವಳಿ ಸುದ್ದಿ: ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23ರ ಗುರುವಾರ ಬೆಳಗ್ಗೆ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ತೇಜಸ್ವಿನಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
 
				 
 





