ಪ್ರೀತಿಸಲು ನಿರಾಕರಿಸಿದಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದ ಆರೋಪಿ ಬಂಧನ
Views: 100
ಕನ್ನಡ ಕರಾವಳಿ ಸುದ್ದಿ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕೃತ್ಯ ಎಸಗಿದ್ದ 28 ವರ್ಷದ ವಿಶ್ಲೇಶ್ ಹಾಗೂ ಆತನಿಗೆ ನೆರವಾಗಿದ್ದ 36 ವರ್ಷದ ಹರೀಶ್ ಬಂಧಿತರು. ಕೃತ್ಯದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಹರೀಶ್ ನೆರವಾಗಿದ್ದ ಎನ್ನಲಾಗಿದೆ.
ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ, 20 ವರ್ಷದ ಯಾಮಿನಿ ಪ್ರಿಯಾ ಅವರನ್ನು ಕೊಲೆ ಮಾಡಿ ಆರೋಪಿಗಳು ಪರಾರಿ ಆಗಿದ್ದರು. ಆರೋಪಿಗಳ ಬಂಧನಕ್ಕೆ ಶ್ರೀರಾಂಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶ್ರೀರಾಂಪುರ ಬಳಿಯ ಸ್ವತಂತ್ರಪಾಳ್ಯದ ವಿಶ್ಲೇಶ್, ತನಗೆ ಪರಿಚಿತಳಾಗಿದ್ದ ಯಾಮಿನಿ ಪ್ರಿಯಾಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆದ್ರೆ, ಪ್ರಿಯಾ ಆತನನ್ನು ನಿರಾಕರಿಸಿದ್ದಳು. ಗುರುವಾರ ಸಂಜೆ ಕಾಲೇಜು ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಅಡ್ಡಗಟ್ಟಿ, ಮುಖಕ್ಕೆ ಖಾರದ ಪುಡಿ ಎರಚಿ, ಕೊಲೆ ಮಾಡಿ ಪರಾರಿಯಾಗಿದ್ದ.