ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ಕೊಡುತ್ತಾ ಹೈಕಮಾಂಡ್..?
 
						Views: 36
ಕನ್ನಡ ಕರಾವಳಿ ಸುದ್ದಿ: ಸಿಎಂ ಪುತ್ರ ಯತೀಂದ್ರ ಉತ್ತರಾಧಿಕಾರಿ ಹೇಳಿಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದ್ದು ಕೆಪಿಸಿಸಿಯಿಂದ ನೋಟಿಸ್ ಕೊಡುತ್ತಾ ಕಾದು ನೋಡಬೇಕಾಗಿದೆ.
ನಾಯಕತ್ವದ ವಿಷಯಕ್ಕೆ ಸಂಬಂಧಿಸಿ ಪದೇ ಪದೆ ಗೊಂದಲ ಸೃಷ್ಟಿಸುವ ಹೇಳಿಕೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಶಿಸ್ತು ಸಮಿತಿಯಿಂದಲೇ ನೋಟಿಸ್ ಜಾರಿಗೊಳಿಸಲಾಗುತ್ತದೆಯೇ ?ಈ ವಿಷಯದಲ್ಲಿ ಯತೀಂದ್ರ ಅವರಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂದು ಕೆಲವು ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದಿಲ್ಲಿಗೆ ಯತೀಂದ್ರ ಅವರ ಎಲ್ಲ ಹೇಳಿಕೆಗಳ ಬಗ್ಗೆ ಕೆಪಿಸಿಸಿಯಿಂದ ವರದಿ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.ಪುತ್ರನ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯ ಮುಜುಗರಕ್ಕೆ ಒಳಗಾಗಿದ್ದು, ನೋಟಿಸ್ ಜಾರಿ ಯಾಗದಂತೆ ಸಿಎಂ ಹೈಕಮಾಂಡ್ ಮೇಲೆ ಪ್ರಭಾವ ಬೀರುತ್ತಿದ್ದಾರೆ.
ಆದರೆ ರಾಜ್ಯ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್ ನೀಡಿಲ್ಲ ಎಐಸಿಸಿಯೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
 
				 
 





