ಜನಮನ

ವಾಯುಭಾರ ಕುಸಿತ: ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

Views: 142

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ. ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ನಿರಂತರ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಗಾಳಿ ರಭಸದಿಂದ ಬೀಸಲಿದ್ದು, ಗುಡುಗು ಸಹಿತ ವರ್ಷಧಾರೆಯಾಗಲಿದೆ. 

ಕರಾವಳಿ ಭಾಗದಲ್ಲಿ ಗಂಟೆಗೆ 40-60 ಕಿ.ಮೀ. ವೇಗದಲ್ಲಿ ಗಾಳಿ, ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

Related Articles

Back to top button