ಇತರೆ
ಕುಂದಾಪುರ: ಕಾವ್ರಾಡಿಯಲ್ಲಿ ಹಣ ಪಣವಾಗಿಸಿಟ್ಟು ಅಂದರ್- ಬಾಹರ್ ಇಸ್ಪೀಟು ಜುಗಾರಿ ಆಟ: ನಾಲ್ವರು ಪೊಲೀಸ್ ವಶಕ್ಕೆ
Views: 299
ಕುಂದಾಪುರ: ಕುಂದಾಪುರ ಸಮೀಪ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಕಾವ್ರಾಡಿ ಗ್ರಾಮದ ಮರಾಸಿ ರಸ್ತೆಯ ಹಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟದ ಬಗ್ಗೆ ದೊರೆತ ಮಾಹಿತಿ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಅನಿಲ್ ದೇವಲ್ಕುಂದ, ಪೂರ್ಣೇಶ ದೇವಲ್ಕುಂದ, ರಘು ,ಕೆಂಚನೂರು, ಯೋಗೀಶ ದೇವಲ್ಕುಂದ ಇವರನ್ನು ಹಾಗೂ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ್ದ 2,480/- ರೂಪಾಯಿ ಮತ್ತು ಆಟಕ್ಕೆ ಬಳಸಿದ ಇತರ ಪರಿಕರಗಳನ್ನು ವಶಪಡಿಸಿಕೊಳ್ಳಲಾಯಿತು.






