ಯುವಜನ
ಪ್ರೀತಿಸುವಂತೆ ಹಿಂಬಾಲಿಸಿ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪೋಷಕರು, ವಿದ್ಯಾರ್ಥಿಗಳಿಂದ ಕಾಲೇಜಿಗೆ ಮುತ್ತಿಗೆ
Views: 184
ಕನ್ನಡ ಕರಾವಳಿ ಸುದ್ದಿ:ಕಾಲೇಜು ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಪೋಷಕರಿಂದ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಪೂಜಗೇರಿ ಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನಲ್ಲಿ ಪಾಠ ಮಾಡುವಾಗ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುವುದು ಮೊಬೈಲ್ ಗೆ ಅಶ್ಲೀಲ ಮೆಸೇಜ್ ಮಾಡುವುದು, ಪ್ರೀತಿ ಮಾಡು ಎಂದು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ರ ವಿರುದ್ಧ ಅಂಕೋಲ ಠಾಣೆಯಲ್ಲಿ ವಿದ್ಯಾರ್ಥಿನಿ ದೂರು ನೀಡಿದ್ದಾಳೆ
ವಿವಿಧ ಸಂಘಟನೆಯವರು ತಹಸೀಲ್ದಾರ ಡಾ. ಚಿಕ್ಕಪ್ಪ ನಾಯಕ, ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಂಜೇಶ್ವರ ನಾಯಕ ಅವರಿಗೆ ಮನವಿ ಸಲ್ಲಿಸಿದರು.






