ಇತರೆ

ಜೊತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಮಗನನ್ನು ರಕ್ಷಣೆಗೆ ಹೋದ ತಾಯಿ,ಮಗ ಸಾವು 

Views: 54

ಕನ್ನಡ ಕರಾವಳಿ ಸುದ್ದಿ: ವಿದ್ಯುತ್ ಅವಘಡದಿಂದ ತಾಯಿ, ಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಣಸೂರು ತಾಲೂಕಿನ ಕಪ್ಪನಾಯನ ಕಾಲೋನಿ – ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರು  ತಾಯಿ ನೀಲಮ್ಮ (42), ಮಗ ಹರೀಶ್ (24) ಮೃತ ತಾಯಿ, ಮಗ ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಬೆಳೆ ಬೆಳೆದಿದ್ದ ಜೋಳ ನೋಡಲು ಹೋಗುತ್ತಿದ್ದ ವೇಳೆ ತಾಯಿ, ಮಗ ವಿದ್ಯುತ್ ಅವಘಡಕ್ಕೆ ಬಲಿಯಾಗಿದ್ದಾರೆ. ಜಮೀನಿನ ಬಳಿ ಬೇಲಿಯ ಬಳಿ ಕೆಳ ಭಾಗಕ್ಕೆ ಜೊತು ಬಿದ್ದಿದ್ದ ವಿದ್ಯುತ್ ತಂತಿ ಮೊದಲು ಹರೀಶ್‌ಗೆ ಸ್ಪರ್ಶಿಸಿ‌ದೆ‌. ಇದರಿಂದ ಆತ ಒದ್ದಾಡುತ್ತಿರುವುದನ್ನು ನೋಡಿ ರಕ್ಷಣೆಗೆ ಹೋದ ತಾಯಿಗೂ ವಿದ್ಯುತ್ ಸ್ಪರ್ಶವಾಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿದ್ಯುತ್ ಇಲಾಖೆ ನಿರ್ಲಕ್ಷ್ಯದಿಂದ ವಿದ್ಯುತ್ ಅವಘಡ ಸಂಭವಿಸಿ ತಾಯಿ-ಮಗ ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

Back to top button
error: Content is protected !!