ಇತರೆ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಲೈಬ್ರೆರಿಯನ್ ಆತ್ಮಹತ್ಯೆ

Views: 140

ಕನ್ನಡ ಕರಾವಳಿ ಸುದ್ದಿ: ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಯ ಕಿರುಕುಳಕ್ಕೆ ಬೇಸತ್ತು ಪಂಚಾಯತಿ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮ ಪಂಚಾಯತಿ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಆತ್ಮಹತ್ಯೆಗೆ ಶರಣಾದವರು, ಕಳೆದ 25 ವರ್ಷದಿಂದ ಅರೆಕಾಲಿಕ ಗ್ರಂಥಾಲಯ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು, ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿ ಪಿಡಿಒ ಗೀತಾಮಣಿ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.

ಕಳೆದ ಮೂರು ತಿಂಗಳಿಂದ ಸಂಬಳ ನೀಡದೇ ಕಿರುಕುಳ ನೀಡುತ್ತಿದ್ದರು. ಜೊತೆಗೆ ಬಯೋಮೆಟ್ರಿಕ್ ಹಾಜರಾತಿ ಹಾಕದೇ, ಇಲ್ಲಸಲ್ಲದ ಕಾರಣ ಹೇಳಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಒದ್ದಾಡುತ್ತಿದ್ದ ರಾಮಚಂದ್ರಯ್ಯ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತುಮಕೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಮೃತ ರಾಮಚಂದ್ರಯ್ಯ ಅವರ ಅಣ್ಣನ ಮಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ದಾಖಲಿಸಿದ್ದು, ದೂರಿನನ್ವಯ ಪಿಡಿಓ ಗೀತಾಮಣಿ ವಿರುದ್ಧ ಎಫ್‌ಐಆರ್ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

Related Articles

Back to top button
error: Content is protected !!