ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು:ಜಿಲ್ಲಾ ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳ ಮ್ಯಾನೇಜ್ಮೆಂಟ್ ಪೆಸ್ಟ್ – ಆರುಣ್ಯ 2025

Views: 81

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳ ಮ್ಯಾನೇಜ್ಮೆಂಟ್ ಪೆಸ್ಟ್ – ಆರುಣ್ಯ 2025 ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ರೆಸಿಡೆನ್ಷಿಯಲ್ ಸ್ಕೂಲ್ ಪ್ರಾಂಶುಪಾಲರಾದ ಶ್ರೀ ಶರಣ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳಲ್ಲಿ ಕೌಶಲ್ಯ ಶಿಸ್ತು ಸ್ಪರ್ಧೆ ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಆ ಮೂಲಕ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಎಂದು ಕಿವಿಮಾತು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದ ಕಾಲೇಜು ಟ್ರಸ್ಟಿ  ಶ್ರೀಮತಿ ಅನುಪಮಾ ಎಸ್ ಶೆಟ್ಟಿ ವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ಕುಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಕೆ ಎಸ್ ಸುಧಾಕರ್ ಶೆಟ್ಟಿ ಬಾಂಡ್ಯ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಾಜಕ್ಕೆ ನಿಮ್ಮಿಂದಾದ ಸಹಾಯ ಮಾಡಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅರುಣ್ ಕುಮಾರ್ ಶೆಟ್ಟಿ ಟ್ರಸ್ಟಿ ಶ್ರೀ ಶಾರದಾ ಕಾಲೇಜ್ ಟ್ರಸ್ಟ್ ಇವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು. ಅರುಣ್ಯ 2025 ಇದರ ಸಂಯೋಜಕರಾದ ಡಾ. ರವಿಚಂದ್ರ ಪ್ರಸ್ತಾವಿಸಿದರು. ಕಾಲೇಜಿನ ಆಡಳಿತ ಅಧಿಕಾರಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಕೆ ಎನ್ ವಂದಿಸಿದರು. ಉಪನ್ಯಾಸಕರಾದ ಶ್ರೀ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಹಾಗೂ ಶ್ರೀಮತಿ ಪ್ರಮೀಳಾ ನಿರೂಪಿಸಿದರು. 

ಫಲಿತಾಂಶ: ಅರಣ್ಯ 2025 ಇದರ ಚಾಂಪಿಯನ್ನಾಗಿ ಪ್ರಥಮ ಸ್ಥಾನವನ್ನು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಹಾಗೂ ದ್ವಿತೀಯ ಸ್ಥಾನ ರನ್ನರ್ಸ್ ಎಕ್ಸಲೆಂಟ್ ಪಿಯು ಕಾಲೇಜ್ ಸುಣ್ಣಾರಿ ಇವರು ಪಡೆದುಕೊಂಡರು.

Related Articles

Back to top button
error: Content is protected !!