ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮೂರು ಮಂದಿ ವಿದ್ಯಾರ್ಥಿಗಳು ನಾಲ್ಕು ಚಿನ್ನದ ಪದಕ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
Views: 372
ಕನ್ನಡ ಕರಾವಳಿ ಸುದ್ದಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಳೆದ ಎರಡು ದಿನಗಳಿಂದ ವಕ್ವಾಡಿಯಲ್ಲಿ ನಡೆಯುತ್ತಿರುವ, ಕುಂದಾಪುರ ತಾಲೂಕು ಮಟ್ಟದ 14 ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ,ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ ಇಲ್ಲಿನ ಮೂರು ಮಂದಿ ವಿದ್ಯಾರ್ಥಿಗಳು ಶ್ಲಾಘನೀಯ ಸಾಧನೆ ಮಾಡಿ, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಎಂಟನೇ ತರಗತಿಯ ಕಿಶನ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಶಿಪ್ ಪಡೆದು ಸ್ಮರಣೀಯ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.10ನೇ ತರಗತಿಯ ರೋಶನ್ ಆರ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಹಾಗೆಯೇ 8ನೇ ತರಗತಿಯ ಸೃಜನ್ ಇವರು ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ . ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 4 ಚಿನ್ನದ ಪದಕ ಹಾಗೂ 1 ಬೆಳ್ಳಿಯ ಪದಕಗಳನ್ನು ಪಡೆದು ಶ್ಲಾಘನೀಯ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಮದರ್ ತೆರೇಸಾ ಶಿಕ್ಷಣಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ಗ್ರಾಮೀಣ ಭಾಗದ ಈ ಮೂರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಅವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.









