ಇತರೆ
ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ವಾಹನ:ರಾಜ್ಯದ ಮೂವರಿಗೆ ಗಂಭೀರ ಗಾಯ
Views: 38
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದ ಮೂಲದ ಕ್ರೂರ್ಜರ ಪಕ್ಕದ ಗೋವಾ ರಾಜ್ಯದಲ್ಲಿ ಅಪಘಾತವಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಶನಿವಾರ ತಡ ರಾತ್ರಿ ಗೋವಾದ ಬಿಚೋಲಿಮ್ ವಾಳಶಿ ಜಂಕ್ಷನ್ ನಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತಕ್ಕೆ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ.
ಕ್ರೂಜರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ದೊಡ್ಡ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಜರ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳೀಯರು ನೇರವಿಗೆ ಧಾವಿಸಿ ವಾಹನದಲ್ಲಿ ಸಿಲುಕಿಕೊಂಡಿದ್ದ ಜನರ ರಕ್ಷಣೆ ಮಾಡಿದ್ದಾರೆ. ಇಷ್ಟೇ ಅಲ್ಲದೆಯೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರೂ ಕೂಡ ಕರ್ನಾಟಕದವರೇ ಆಗಿದ್ದು ಇವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗೋವಾ ಬಿಚೋಲಿ ಪೋಲಿಸರು ಈ ಘಟನೆಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.






