ಶಿಕ್ಷಣ

ವಿದ್ಯಾರ್ಥಿನಿಯರಿಂದ ಕಾಲಿಗೆ ಮಸಾಜ್ ಮಾಡಿಕೊಂಡ ಮುಖ್ಯ ಶಿಕ್ಷಕಿ!

Views: 160

ಕನ್ನಡ ಕರಾವಳಿ ಸುದ್ದಿ:ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಕುರ್ಚಿಯಲ್ಲಿ ಕುಳಿತು ಫೋನ್‌ನಲ್ಲಿ ಮಾತನಾಡುತ್ತಾ, ವಿದ್ಯಾರ್ಥಿನಿಯರಿಂದ ಕಾಲನ್ನು ಮಸಾಜ್ ಮಾಡಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ.

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಮೆಲಿಯಾಪು ಮಂಡಲದ ಬಂಡಹಳ್ಳಿ ಗರ್ಲ್ಸ್ ಟ್ರೈಬಲ್‌ ಆಶ್ರಮ ಶಾಲೆಯಲ್ಲಿ ನಡೆದ ಘಟನೆ ಇದೀಗ ರಾಜ್ಯದೆಲ್ಲೆಡೆ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಶಿಕ್ಷಕಿಯ ಪಾದಗಳನ್ನು ಮಸಾಜ್ ಮಾಡುತ್ತಿರುವುದು ಕಾಣಿಸುತ್ತದೆ. ಈ ದೃಶ್ಯ ವೈರಲ್ ಆದ ನಂತರ, ಅಧಿಕಾರಿಗಳು ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಶಿಕ್ಷಕಿಗೆ ಶೋ-ಕಾಸ್ ನೋಟಿಸ್ ನೀಡಿದ್ದು, ತನಿಖೆಗೆ ಆದೇಶಿಸಿದ್ದಾರೆ. ಶಿಕ್ಷಕಿ ನೀಡಿದ ಸ್ಪಷ್ಟಿಕರಣದಲ್ಲಿ ತಾನು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ಆ ದಿನ ಬಿದ್ದಿದ್ದರಿಂದ ವಿದ್ಯಾರ್ಥಿನಿಯರು ಕೇವಲ ಸಹಾಯ ಮಾಡಿದರು, ವಿಡಿಯೋ ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಆದರೆ ಹೊಸ ವಿಡಿಯೋ ಹೊರಬಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತೆ ತನಿಖೆ ಆರಂಭಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

 

Related Articles

Back to top button
error: Content is protected !!