ಸಾಂಸ್ಕೃತಿಕ

ರುಕ್ಮಿಣಿ ವಸಂತ್ ಹೆಸರಿನಲ್ಲಿ ಕರೆ ಮಾಡಿ ಹಣಕ್ಕೆ ಬೇಡಿಕೆ: ಎಚ್ಚರಿಸಿದ ಕಾಂತಾರ ನಟಿ

Views: 119

ಕನ್ನಡ ಕರಾವಳಿ ಸುದ್ದಿ: ಕಾಂತಾರ ಚಾಪ್ಟರ್ 1′ ಚಿತ್ರದ ಮೂಲಕ ಭಾರತದಾದ್ಯಂತ ಜನಪ್ರಿಯರಾಗಿರುವ ನಟಿ ರುಕ್ಮಿಣಿ ವಸಂತ್ ಅವರ ಹೆಸರನ್ನು ಅಪರಿಚಿತ ವ್ಯಕ್ತಿಗಳು ತಪ್ಪು ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದಾರೆ.ನಟಿ ಎಚ್ಚರಿಕೆಯ ಸಂದೇಶ ನೀಡಿದ್ದು, ಜಾಗರೂಕರಾಗಿರಿ ಎಂದು ತಿಳಿಸಿದ್ದಾರೆ.

ನಟಿ ರುಕ್ಮಿಣಿ ವಸಂತ್ ಹೇಳಿದ್ದಿಷ್ಟು: ಪ್ರಮುಖ ಅಲರ್ಟ್ ಮತ್ತು ಜಾಗೃತಿ ಸಂದೇಶ: 9445893273 ಸಂಖ್ಯೆಯನ್ನು ಬಳಸಿಕೊಂಡು, ನನ್ನಂತೆ ನಟಿಸಿ, ಸುಳ್ಳು ನೆಪದಲ್ಲಿ ವಿವಿಧ ಜನರನ್ನು ಸಂಪರ್ಕಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಖ್ಯೆ ನನಗೆ ಸೇರಿಲ್ಲ. ಈ ನಂಬರ್ ನಿಂದ ಬರುವ ಯಾವುದೇ ಮೆಸೇಜ್ ಅಥವಾ ಕರೆಗಳು ಸಂಪೂರ್ಣ ಫೇಕ್ ಎಂಬುದನ್ನು ಸ್ಪಷ್ಟಪಡಿಸಲು ನಾನು ಬಯಸುತ್ತೇನೆ. ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ ಅಥವಾ ಅವರೊಂದಿಗೆ ಕನೆಕ್ಟ್ ಆಗಬೇಡಿ. ಈ ಕೃತ್ಯವು ಸೈಬರ್ ಅಪರಾಧದ ಅಡಿ ಬರುತ್ತದೆ. ಅಂತಹ ವಂಚನೆ ಮತ್ತು ದಾರಿತಪ್ಪಿಸುವ ಕೆಲಸದಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ, ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳಿವಳಿಕೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಎಂದು ತಿಳಿಸಿದ್ದಾರೆ.

 

 

Related Articles

Back to top button
error: Content is protected !!