ಶಿಕ್ಷಣ

ಗುರುಕುಲ ವಿದ್ಯಾ ಸಂಸ್ಥೆಯಲ್ಲಿ 20ನೇ ವಾರ್ಷಿಕ ಕ್ರೀಡಾಕೂಟ

Views: 749

ಕನ್ನಡ ಕರಾವಳಿ ಸುದ್ದಿ:  ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯಲ್ಲಿ 20 ನೇ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ಅಂಗ ಸಂಸ್ಥೆಗಳಾದ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಗುರುಕುಲ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಡಾ. ಜಿತೇಂದ್ರ ಶೆಟ್ಟಿ ಸಹ ನಿರ್ದೇಶಕರು, ಯುವಜನತೆ ಸಬಲೀಕರಣ ಮತ್ತು ಕರ್ನಾಟಕ ಕ್ರೀಡಾ ಇಲಾಖೆ , ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಧನಾತ್ಮಕವಾದ ಚಿಂತನೆಯು ನಮ್ಮ ಬದುಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು. ಸತತ ಪ್ರಯತ್ನದಿಂದ ಗೆಲುವಿನ ಮೆಟ್ಟಿಲನ್ನು ಹತ್ತಬಹುದು. ಕ್ರೀಡೆಯು ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡುವುದಲ್ಲದೆ ಬದುಕಿನಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಲು ಹೆಚ್ಚು ಸಹಕಾರಿಯಾಗುತ್ತದೆ ಎಂದರು. ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀ ಕೆ.ಸುಭಾಶ್ಚಂದ್ರ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗೌರವ ಉಪಸ್ಥಿತಿಯಲ್ಲಿ ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿರವರು ಇದ್ದರು. ಶ್ರೀಮತಿ ಬಬಿತಾ ಎಸ್ ಶೆಟ್ಟಿ ಅತಿಥಿ ಗಣ್ಯರನ್ನು ಪರಿಚಯಿಸಿದ್ದು, ಶ್ರೀಮತಿ ಸುಮಲತಾ ಎಸ್ ಭಂಡಾರಿ ವಿದ್ಯಾರ್ಥಿಗಳ ಪಥ ಸಂಚಲನ ನಡೆಸಿಕೊಟ್ಟರು. ಪ್ರಾಂಶುಪಾಲರಾದ ಡಾ. ರೂಪಾ ಶಣೈ ರವರು ವೇದಿಕೆ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶಿಕ್ಷಕಿ ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದ್ದು, ಶ್ರೀಮತಿ ಸುಜಾತ ಕಿರಣ್ ಶೆಟ್ಟಿ ವಂದಿಸಿದರು.

Related Articles

Back to top button
error: Content is protected !!