ಜನಮನ

ದೆಹಲಿ ಕಾರು ಸ್ಫೋಟ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್

Views: 58

ಕನ್ನಡ ಕರಾವಳಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ.

ದೆಹಲಿಯ ಜನನಿಬಿಡ ಪ್ರದೇಶ ಕೆಂಪುಕೋಟೆಯ ಮೆಟ್ರೋ ಸ್ಟೇಷನ್ ಬಳಿ ಕಾರು ಸ್ಫೋಟಗೊಂಡಿದ್ದು, ಹಲವರ ದೇಹ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.

ದೆಹಲಿಯಲ್ಲಿ ಕಾರು ಸ್ಫೋಟದ ಬೆನ್ನಲ್ಲೇ ದೇಶದ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪೊಲೀಸರ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೆಂಪುಕೋಟೆ, ಗ್ರೇಟರ್ ನೊಯ್ಡಾ ಸೇರಿದಂತೆ ಹಲವೆಡೆ ಅನುಮಾನಾಸ್ಪದ ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗಿದೆ.

ನವ ದೆಹಲಿ ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಬೆಂಗಳೂರಿನ ಏರ್‌ಪೋರ್ಟ್, ರೈಲ್ವೆ ಹಾಗೂ ಮೆಟ್ರೋ ನಿಲ್ದಾಣಗಳು ಸೇರಿ ಪ್ರಮುಖ ಸ್ಥಳಗಳಲ್ಲಿ ಪೊಲೀಸ್‌ ಬಿಗಿ ಭದ್ರತೆಗೆ ಡಿಜಿ-ಐಜಿಪಿ ಡಾ. ಸಲೀಂ ಸೂಚಿಸಿದ್ದಾರೆ.

ನಗರ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಹೈ ಅಲರ್ಟ್ ಸೂಚಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳ ಸ್ಥಳಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದ್ದು, ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಇದರ ಜತೆಗೆ ರಾತ್ರಿಯೂ ಗಸ್ತು ಹೆಚ್ಚಳ, ಬಸ್ ನಿಲ್ದಾಣ ಮೆಟ್ರೋ ನಿಲ್ದಾಣಗಳಲ್ಲೂ ನಿಗಾ ಇಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿ ಮಾತ್ರವಲ್ಲದೆ ಮುಂಬೈ, ಹೈದರಾಬಾದ್‌, ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಎನ್‌ಐಎ, ಎನ್‌ಎಸ್‌ಜಿ ತಂಡಗಳು ತೆರಳಿ ಪರಿಶೀಲಿಸುತ್ತಿದ್ದು, ಘಟನೆ ಹಿಂದೆ ಉಗ್ರರ ಕೈವಾಡ ಇದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ

Related Articles

Back to top button
error: Content is protected !!