ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಅಧಿಸೂಚನೆ ಕುರಿತು ಇಂದು ಹೈಕೋರ್ಟ್ ನಲ್ಲಿ ವಿಚಾರಣೆ
Views: 68
ಕನ್ನಡ ಕರಾವಳಿ ಸುದ್ದಿ: ಗ್ರಾಮ ಪಂಚಾಯತ್ ಗಳಿಗೆ ಸಕಾಲದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗುವಂತೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ತತ್‌ಕ್ಷಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ನಿರ್ದೇಶನ ನೀಡಬೇಕು ಎಂದು ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ರಾಜ್ಯದ ಜಿ.ಪಂ. ಹಾಗೂ ತಾ.ಪಂ. ಚುನಾವಣೆಗಳ ವಿಷಯ ವಾಗಿ 4 ವರ್ಷಗಳಿಂದ ಸರಕಾರದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ರಾಜ್ಯ ಚುನಾವಣ ಆಯೋಗವು ಈಗ ಗ್ರಾ.ಪಂ ಚುನಾವಣೆಯ ವಿಷಯದಲ್ಲೂ ಹೈಕೋರ್ಟ್ ಮೆಟ್ಟಿಲೇರಿದೆ. ಮುಂದಿನ ವರ್ಷ ಜನವರಿಯಲ್ಲಿ ಅವಧಿ ಮುಗಿಯಲಿರುವ ರಾಜ್ಯದ 5,950 ಗ್ರಾ.ಪಂ.ಗಳಿಗೆ ಸಕಾಲದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗುವಂತೆ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಬೇಕಿದೆ. ಈ ಬಗ್ಗೆ ತತ್‌ಕ್ಷಣ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣ ಆಯೋಗವು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ನ. 12ರಂದು ವಿಚಾರಣೆಗೆ ನಿಗದಿಯಾಗಿದೆ.






