ಕ್ರೀಡೆ

ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭ 

Views: 62

ಕನ್ನಡ ಕರಾವಳಿ ಸುದ್ದಿ: ಶಿಕ್ಷಣ ಇಲಾಖೆ, ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಪ.ಪೂ. ಕಾಲೇಜಿನ ಕ್ರೀಡಾಂಗಣದಲ್ಲಿ 3 ದಿನಗಳ ಕಾಲ ನಡೆಯುವ ಜಿಲ್ಲಾ ಮಟ್ಟದ 14ರೊಳಗಿನ 17ರೊಳಗಿನ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನವಂಬರ್ 12ರಂದು ವೈಭವದಿಂದ ನಡೆಯಿತು.

ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ ಕ್ರೀಡಾಕೂಟವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಅವರು, ಶ್ರದ್ಧೆ, ಪ್ರಾಮಾಣಿಕತೆ,ಬದ್ಧತೆಯಿಂದ ಸಾಮೂಹಿಕವಾಗಿ ಕೆಲಸ ಮಾಡಿದರೆ ಕ್ರೀಡೆ ಇನ್ನಷ್ಟು ಮೇಲ್ಮಟ್ಟಕ್ಕೆ ಹೋಗಲು ಸಾಧ್ಯ. ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾ ಪ್ರತಿಭೆಗಳು ಮೂಡಿಬರಲಿ, ಕ್ರೀಡಾಳುಗಳು ಉತ್ತಮ ಪ್ರದರ್ಶನ ನೀಡಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಿಂಚುವುದರೊಂದಿಗೆ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು.

ಮುಂಬಯಿ ಉದ್ಯಮಿ ಸುರೇಶ್ ಡಿ. ಕಾಂಚನ್ ಕ್ರೀಡಾ ಪಥ ಸಂಚಲನೆಯಲ್ಲಿ ಗೌರವ ರಕ್ಷೆ ಸ್ವೀಕರಿಸಿ, ಅಭೂತಪೂರ್ವ ಕ್ರೀಡಾಕೂಟವನ್ನು ಆಯೋಜಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶಿಕ್ಷಣ ಸಂಸ್ಥೆಯ ಉನ್ನತ ಮಟ್ಟದ ಬೆಳವಣಿಗೆಗೆ ಸದಾ ನಿಮ್ಮೊಂದಿಗಿದ್ದು, ಸಹಕಾರ ನೀಡುತ್ತೇನೆ ಎಂದರು.

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರ ರಾಜ್ಯ ಮಟ್ಟದಲ್ಲಿ ಸಾಧನೆಗೈದ 40-50 ಕ್ರೀಡಾ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಉಚಿತ, ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಿ, ಪ್ರೋತ್ಸಾಹಿಸಲಾಗುತ್ತಿದೆ. ಸಂಸ್ಥೆಯ ವಿದ್ಯಾರ್ಥಿಗಳ ಇನ್ನಷ್ಟು ಸಾಧನೆಗೆ ನಿಮ್ಮೆಲ್ಲರ ಪ್ರೋತ್ಸಾಹ ಅತ್ಯಗತ್ಯ ಎಂದರು.

ಜಿ.ಪಂ. ಮಾಜಿ ಅಧ್ಯಕ್ಷ ಸಹಕಾರಿ ಧುರೀಣ ಎಸ್. ರಾಜು ಪೂಜಾರಿ ಕ್ರೀಡಾ ಜ್ಯೋತಿ ಬೆಳಗಿಸಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಖಾರ್ವಿ ಕ್ರೀಡಾ ಧ್ವಜಾ ರೋಹಣಗೈದರು.ವಿವಿವಿ ಮಂಡಳಿ ಸದಸ್ಯರಾದ ಹಸನ್ ಸಾಹೇಬ್, ರಾಘವೇಂದ್ರ ಕುಲಾಲ್ ಪಾರಿವಾಳ ಹಾರಿ ಬಿಡುವುದರ ಮೂಲಕ ಚಾಲನೆ ನೀಡಿದರು.

ಜನಾಕರ್ಷಣೀಯ ವೈಭವದ ಮೆರವಣಿಗೆ

ಕಾರ್ಯಕ್ರಮ ಉದ್ಘಾಟನೆಗೆ ಮುನ್ನ  ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ ಹೆಮ್ಮಾಡಿ ಪೇಟೆಯ ಮೂಲಕವಾಗಿ ಜನತಾ ಕಾಲೇಜುವರೆಗೆ ಕೀಲು ಕುದುರೆ, ಯಕ್ಷಗಾನ, ತಟ್ಟಿರಾಯ, ಮೋಜು ಮೋಜಿನ ಮುಖವಾಡದೊಂದಿಗೆ ನೃತ್ಯ, ಶೈಕ್ಷಣಿಕ ಸಾಧನೆ ಸಾರುವ ಟ್ಯಾಬ್ಲೊಗಳಿಂದ ವೈಭವದ ಆಕರ್ಷಣೀಯ ಮೆರವಣಿಗೆ ಗಮನಸೆಳೆಯಿತು.

ನಂತರ ಐದು ವಲಯಗಳ ಕ್ರೀಡಾ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪ ನಿರ್ದೇಶಕರಾದ ಲೋಕೇಶ್ ಸಿ, ಉದ್ಯಮಿ ಸುರೇಶ್ ಡಿ ಕಾಂಚನ್, ಹೆಮ್ಮಾಡಿ ವಿವಿವಿ ಮಂಡಳಿ ಸದಸ್ಯ ರಾಜು ಪೂಜಾರಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.

ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಶೇಖರ್ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ ಬ್ರಹ್ಮಾವರ ಪ್ರಭಾರ ಬಿಇಒ. ಉಮಾ, ದೈ.ಶಿ. ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಕುಂದಾಪುರದ ಯುವಜನಾ ಸೇವಾಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಬೈಂದೂರಿನ ವಿಜಯ ಕುಮಾರ್ ಶೆಟ್ಟಿ ಕಾರ್ಕಳದ ರವಿಚಂದ್ರ ಕಾರಂತ್, ಉಡುಪಿಯ ರವೀಂದ್ರ ಶೆಟ್ಟಿ ಬ್ರಹ್ಮಾವರದ ನಿತ್ಯಾನಂದ ಶೆಟ್ಟಿ ಕುಂದಾಪುರದ ಸತ್ಯನಾರಾಯಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿಶನ್ ರಾಜ್ ಶೆಟ್ಟಿ ಉಪಾಧ್ಯಕ್ಷರಾದ ರವಿಶಂಕರ್‌ಹೆಗ್ಡೆ, ರವಿ ಶೆಟ್ಟಿ ಬೈಂದೂರು ವಲಯದ ದೈ.ಶಿ. ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್‌ ಕುಮಾರ್‌ಶೆಟ್ಟಿ ಬೈಂದೂರಿನ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ ಗ್ರೇಡ್ -2 ದೈ.ಶಿ. ಶಿಕ್ಷಕರ ಸಂಘದ ಅಧ್ಯಕ್ಷಸತೀಶ್ ಬಾಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ನಿವೃತ್ತ ಮುಖ್ಯೋಪಾಧ್ಯಾಯ ನಂದಿ ದೇವಾಡಿಗ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್ ಶೆಟ್ಟಿ ಹಳೆ ವಿದ್ಯಾರ್ಥಿ ಸಂಘದ ರಾಘವೇಂದ್ರ ಕುಲಾಲ್, ವಿವಿವಿ ಮಂಡಳಿ ಸದಸ್ಯರಾದ ಹಸನ್ ಸಾಹೇಬ್, ಸಾಧು ಬಿಲ್ಲವ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ, ಗ್ರಾ.ಪಂ. ಮಾಜಿ ಸದಸ್ಯ ಯಾಸಿನ್ ಹೆಮ್ಮಾಡಿ, ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಇನ್ನಿತರ ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ಜನತಾ ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು. ಕರಾಟೆಪಟು ರಜತ್ ಪ್ರತಿಜ್ಞಾ ವಿಧಿ ಬೋಧಿಸಿದರು.

 

 

Related Articles

Back to top button
error: Content is protected !!