ಯುವಜನ

ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು 

Views: 68

ಕನ್ನಡ ಕರಾವಳಿ ಸುದ್ದಿ:ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ.

ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿ ವರುಣ್ ದೇಸಾಯಿ (19) ಎಂದು ಗುರುತಿಸಲಾಗಿದೆ.

2 ಬೈಕಿನಲ್ಲಿ ಐವರು ಸ್ಮೇಹಿತರು ಜಲಪಾತ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದಿದೆ. ಸೆಲ್ಫಿ ತೆಗೆಯುವ ವೇಳೆ ವರುಣ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ನಂತರ, ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿವರೆಗೂ ಶೋಧ ಕಾರ್ಯ ನಡೆಸಿದ್ದು, ಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿದೆ.ಘಟನೆಯ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!