ಇತರೆ

ಕುಂದಾಪುರ: ಕೋಡಿಯ ಹಳೆ ಅಳಿವೆ ಬೀಚ್ ರಸ್ತೆಯಲ್ಲಿ ಅಪರಿಚಿತ ವಾಹನ ಢಿಕ್ಕಿಯಾಗಿ ವ್ಯಕ್ತಿ ಸಾವು

Views: 124

ಕನ್ನಡ ಕರಾವಳಿ ಸುದ್ದಿ: ಅಪರಿಚಿತ ವಾಹನ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಡಿಯ ಹಳೆ ಅಳಿವೆ ಬೀಚ್ ರಸ್ತೆಯಲ್ಲಿ ಸಂಭವಿಸಿದೆ.

ಕೋಡಿ ನಿವಾಸಿ ರಮೇಶ್ ಪೂಜಾರಿ (63) ಮೃತಪಟ್ಟವರು.

ನ.16ರ ರಾತ್ರಿ 11.15ರಿಂದ ನ. 17ರ ಬೆಳಗ್ಗೆ 8 ಗಂಟೆಯ ಮಧ್ಯದ ಅವಧಿಯಲ್ಲಿ ಹಳೆ ಅಳಿವೆ ಕಡೆಯಿಂದ  ಬೀಜಾಡಿ ಕಡೆಗೆ ಬೀಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯಾವುದೋ ವಾಹನ ಬಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಹಾಗೂ ಸಂಬಂಧಿಕರು  ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ನ. 17ರ ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಅಳಿಯ ಹಟ್ಟಿಕುದ್ರು ನಿವಾಸಿ ದಿನಕರ ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!