ಸಾಂಸ್ಕೃತಿಕ
ಮಹಿಷಾಸುರ ಪಾತ್ರದಲ್ಲಿರುವಾಗಲೇ ಬಣ್ಣದ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ಸಾವು
Views: 562
ಕನ್ನಡ ಕರಾವಳಿ ಸುದ್ದಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ (50) ‘ದೇವಿ ಮಹಾತ್ಮೆ’ ಪ್ರಸಂಗದಲ್ಲಿ ಮಹಿಷಾಸುರ ಪಾತ್ರದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾರ್ದಳ್ಳಿ- ಮಂಡಳ್ಳಿ ಸೌಡದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.



ವೇಷ ಮುಗಿಸುವ ಮುನ್ನವೇ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಗೌಡರು ಲಂಕಿನಿ, ಸೂರ್ಪನಕ, ರಕ್ತಕೇಶಿ ಮುಂತಾದ ಬಣ್ಣದ ವೇಷವನ್ನು ಅದ್ಭುತವಾಗಿ ಅಭಿನಯಿಸುತ್ತಿದ್ದರು.






