ಶಿಕ್ಷಣ
ಭಗವದ್ಗೀತೆ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷ ರಾಜ್ಯ ಮಟ್ಟಕ್ಕೆ ಆಯ್ಕೆ
Views: 104
ಕನ್ನಡ ಕರಾವಳಿ ಸುದ್ದಿ: ಶ್ರೀ ಸೊಂದ ಸ್ವರ್ಣವಲ್ಲಿ ಮಹಾಸಂಸ್ಥಾನ ಮತ್ತು ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಮಠ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಭಗವದ್ಗೀತಾ ಅಭಿಯಾನ ಸ್ಪರ್ಧೆಯ ಅಂಗವಾಗಿ ನಡೆದ ‘ಭಗವದ್ಗೀತೆ ಮನ ಸ್ವಾಸ್ತ್ಯದ ಕೈಪಿಡಿ ‘ ಎಂಬ ವಿಷಯದ ಕುರಿತು ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಪ್ರತೀಕ್ಷ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಅವರು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.

ಇವರ ಯಶಸ್ಸಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ತಂಡ ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇನ್ನೂ ದೊಡ್ಡ ಮಟ್ಟದ ಸಾಧನೆ ಮಾಡಲು ಶುಭ ಹಾರೈಸಿದ್ದಾರೆ.






