ಶಿಕ್ಷಣ

ಕೋಟೇಶ್ವರ ಸರ್ಕಾರಿ ಪದವಿ ಕಾಲೇಜು: ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ

Views: 128

ಕನ್ನಡ ಕರಾವಳಿ ಸುದ್ದಿ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ‘ರಾಷ್ಟ್ರೀಯ ದತ್ತು ಮಾಸಾಚರಣೆ’ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಆಶ್ರಯದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯೋಜನೆಯಲ್ಲಿ ‘ಕಾನೂನು ಬದ್ಧ ದತ್ತು’ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಸುಜಾತ ವಾಸುದೇವ, ಮಾಜಿ ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಉಡುಪಿ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರತ್ನ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರು ಕಾನೂನು ಬದ್ಧ ದತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಾರದಾ ವೈ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಮತ್ತು ಶ್ರೇಯಸ್, ಯೋಜನಾ ಸಹವರ್ತಿ, ಡಬ್ಲೂö್ಯಎಐಸಿ ಇವರು ಕಾಲೇಜು ವಿದ್ಯಾರ್ಥಿಗಳಿಗೆ ಪೋಕ್ಸೋ, ಬಾಲ್ಯ ವಿವಾಹ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ, ಮಕ್ಕಳ ರಕ್ಷಣೆ ಮತ್ತು ಪೋಷಣೆ ಕುರಿತಾಗಿ ಮಾಹಿತಿ ಮತ್ತು ಕಾನೂನು ಅರಿವು ನೀಡಿದರು. ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಭಿತ್ತಿ ಚಿತ್ರ ಪ್ರದರ್ಶನ ಮತ್ತು ಕಿರು ನಾಟಕದ ಮುಖಾಂತರ ‘ಕಾನೂನು ಬದ್ಧ ದತ್ತು’ ಕುರಿತಾಗಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ಧರು. ಈ ಸಂದರ್ಭದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ನಿರಂಜನ ಶರ್ಮ ಮತ್ತು ಶೃತಿ ಆಚಾರ್ಯ ಎನ್. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜುವೇರಿಯಾ ನಿರೂಪಿಸಿದರು. ಅಕ್ಷತಾ ಸ್ವಾಗತಿಸಿದರು, ಅಕ್ಷಯ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ “ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆ”ಯ ಸಂಕಲ್ಪ ಸಂದೇಶವನ್ನು ವಿದ್ಯಾರ್ಥಿನಿ ಶ್ರೀರಕ್ಷಾ ವಾಚಿಸಿದರು.

Related Articles

Back to top button
error: Content is protected !!