ಶಿಕ್ಷಣ

ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Views: 76

ಕನ್ನಡ ಕರಾವಳಿ ಸುದ್ದಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ,ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಇವರ ಸಹಭಾಗಿತ್ವದಲ್ಲಿ ಇಂದು ನಡೆದ ಕುಂದಾಪುರ ವಲಯ ಮಟ್ಟದ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿ ವಿಭಾಗದ ಹೆಮ್ಮೆಯ ವಿದ್ಯಾರ್ಥಿನಿ ಪ್ರತೀಕ್ಷಾ ಇವರು ಪ್ರಥಮ ಸ್ಥಾನ ಗಳಿಸಿ, ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ . 

ವಿಜೇತ ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪ ಪ್ರಾಂಶುಪಾಲರು, ಎಲ್ಲಾ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

Related Articles

Back to top button
error: Content is protected !!