ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರಕೂರಿನಲ್ಲಿ “ಕ್ರೀಡಾ ಸಂಭ್ರಮ”
Views: 212
ಕನ್ನಡ ಕರಾವಳಿ ಸುದ್ದಿ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡುಕಟ್ಟಿನ ವ್ಯಾಪ್ತಿಯಲ್ಲಿ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಆಶ್ರಯದಲ್ಲಿ ನವಂಬರ್ 30 ರಂದು ‘ಕ್ರೀಡಾ ಸಂಭ್ರಮ’ ನಡೆಯಿತು.
ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಇಂದಿನ ಯುವ ಜನಾಂಗದವರು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಸಮಾಜಮುಖಿ ಪರಿಪೂರ್ಣ ವ್ಯಕ್ತಿತ್ವವನ್ನಾಗಿ ರೂಪುಗೊಳ್ಳಲು ಜೀವನ ಸಾರ್ಥಕಗೊಳಿಸಿಕೊಳ್ಳಿ ಎಂದರು.
ಸಂಘಟನಾ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿಗಾರ ಸುರತ್ಕಲ್ ಕ್ರೀಡಾ ಧ್ವಜಾರೋಹಣಗೈದರು. ಮಹಿಳಾ ವೇದಿಕೆಯ ಯಶೋಧ ಶ್ರೀನಿವಾಸ ಶೆಟ್ಟಿಗಾರ್ ವಾಲಿಬಾಲ್ ಕೋರ್ಟ್ ಉದ್ಘಾಟಿಸಿದರು.ವೀರೇಶ್ವರ ಸಮಿತಿಯ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಮಣಿಪಾಲ್ ಥ್ರೋಬಾಲ್ ಕೋರ್ಟ್ ಉದ್ಘಾಟಿಸಿದರು.
ವೇದಿಕೆಯಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಜಯರಾಮ ಶೆಟ್ಟಿಗಾರ್, ಸಂಘಟನಾ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಶೆಟ್ಟಿಗಾರ ಸುರತ್ಕಲ್, ವೀರೇಶ್ವರ ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿಗಾರ್ ಮಣಿಪಾಲ್, ಸಂಘಟನಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್ ಸಂತೆಕಟ್ಟೆ, ಯುವ ವೇದಿಕೆ ಅಧ್ಯಕ್ಷ ಸಂಜೀವ ಶೆಟ್ಟಿಗಾರ ಸಾಸ್ತಾನ, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಾವತಿ ಸದಾಶಿವ ಶೆಟ್ಟಿಗಾರ ಬ್ರಹ್ಮಾವರ.ಅಭಿವೃದ್ಧಿ ಸಮಿತಿ ಸಹ ಮೊಕ್ತೇಸರರು,ಟ್ರಸ್ಟ್, ಗುರಿಕಾರರು, ಸಂಘಟನಾ ಸಮಿತಿ, ಮಹಿಳಾ ವೇದಿಕೆ, ಯುವ ಸಮಿತಿ, ವೀರೇಶ್ವರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿಗಾರ್ ಹಂದಾಡಿ ಕ್ರೀಡಾ ತರಬೇತಿ ನೀಡಿದ್ದರು.
ಯುವ ವೇದಿಕೆ ಅಧ್ಯಕ್ಷ ಸಂಜೀವ ಶೆಟ್ಟಿಗಾರ್ ಸ್ವಾಗತಿಸಿದರು. ಸಹ ಮೊಕ್ತೇಸರ ಡಾ. ಶಿವಪ್ರಸಾದ್ ಶೆಟ್ಟಿಗಾರ್ ದಾನಿಗಳು ಪಟ್ಟಿ ವಾಚಿಸಿದರು. ಸವಿತಾ ಭಾಸ್ಕರ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ವೇದಿಕೆಯ ಅಧ್ಯಕ್ಷೆ ಚಂದ್ರಾವತಿ ಸದಾಶಿವ ಶೆಟ್ಟಿಗಾರ್ ವಂದಿಸಿದರು.
ಬಹುಮಾನ ವಿತರಣಾ ಸಮಾರಂಭ: ಅಪರಾಹ್ನ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀನಿವಾಸ ಶೆಟ್ಟಿಗಾರ ಬಹುಮಾನ ವಿತರಿಸಿದರು.ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರಾದ ನಾರಾಯಣ ಶೆಟ್ಟಿಗಾರ ಹಂದಾಡಿ, ನವೀನ್ ಚಂದ್ರ, ಚಂದ್ರಶೇಖರ ನಾಯಕ್ ಉಮಾನಾಥ್, ರಜತ್ ಅವರನ್ನು ಗೌರವಿಸಲಾಯಿತು.ದಾನಿಗಳನ್ನು ಅಭಿನಂದಿಸಲಾಯಿತು.
















