ಯುವಜನ

ಉಡುಪಿ: ಪ್ರಥಮ ವರ್ಷದ ಎಂಎಸ್‌ಸಿ ಫೋರೆನ್ಸಿಕ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಆತ್ಮಹತ್ಯೆ

Views: 153

ಕನ್ನಡ ಕರಾವಳಿ ಸುದ್ದಿ: ಇಲ್ಲಿನ ಶಿಕ್ಷಣ ಸಂಸ್ಥೆಯೊಂದರಲ್ಲಿ ಪ್ರಥಮ ವರ್ಷದ ಎಂಎಸ್‌ಸಿ ಫೋರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಿಹಾರ ಮೂಲದ ದೃಷ್ಟಿ ರಾಣಿ (24) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಸುಮಾರು ಒಂದು ವರ್ಷದಿಂದ ಮಾನಸಿಕ ಸಮಸ್ಯೆ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ನ. 30ರಂದು ಸಂಜೆ ಸಹೋದರಿಗೆ ಕರೆ ಮಾಡಿ ನನಗೆ  ಓದಿರುವುದು ಕೂಡ ನೆನಪಿನಲ್ಲಿ ಉಳಿಯುತ್ತಿಲ್ಲ ಪರೀಕ್ಷೆ ಹತ್ತಿರ ಬಂದಿರುವುದರಿಂದ ತುಂಬಾ ಕಷ್ಟವಾಗುತ್ತಿದೆ ಎಂದು ತಿಳಿಸಿ ಕರೆಯನ್ನು ಕಟ್ ಮಾಡಿದ್ದರು.

ವೈಯಕ್ತಿಕ ಕಾರಣ ಅಥವಾ ಇನ್ನಾವುದೋ ಕಾರಣದಿಂದ ಜೀವನದಲ್ಲಿ ಜುಗುಪ್ಪೆಗೊಂಡು ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!