ಇತರೆ

ಸಿದ್ದಾಪುರ: ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೃಷಿಕ ಸಾವು

Views: 99

ಕನ್ನಡ ಕರಾವಳಿ ಸುದ್ದಿ: ತೆಂಗಿನ ಕಾಯಿ ಕೊಯ್ಯುತ್ತಿದ್ದ ಕೃಷಿಕರೊಬ್ಬರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಿದ್ದಾಪುರದಲ್ಲಿ ನಡೆದಿದೆ.

ಸಿದ್ದಾಪುರ ಗ್ರಾಮದ ಮೇಲ್ಮಡ್ರಿ ರವೀಂದ್ರನಾಥ ಶೆಟ್ಟಿ (70) ಮೃತಪಟ್ಟವರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅವರು ಡಿ.9ರಂದು ತೆಂಗಿನ ಕಾಯಿ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಕೂಡಲೇ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪುತ್ರಿ ಪುಷ್ಪಲತಾ ಶೆಟ್ಟಿ ಅವರು  ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!