ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜು: ವಾರ್ಷಿಕ ಕ್ರೀಡಾಕೂಟ
Views: 226
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಶ್ರೀ ಮೂಕಾಂಬಿಕಾ ದೇವಾಲಯ ಪದವಿಪೂರ್ವ ಕಾಲೇಜು ಕೊಲ್ಲೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸುಕೇಶ್ ಶೆಟ್ಟಿ ಹೊಸಮಠ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಮತ್ತು ಕ್ರೀಡಾ ಸ್ಪೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಹಾಗೂ ಕ್ರೀಡೆಯಿಂದ ತಮ್ಮ ಜೀವನವನ್ನು ಕಟ್ಟಿಕೊಳ್ಳಬಹುದು ಎಂದು ಹೇಳಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಟ್ರಸ್ಟಿಗಳಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ವಹಿಸಿದ್ದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಕಾಲೇಜಿನ ಆಡಳಿತ ಅಧಿಕಾರಿ ಡಾ. ಮೋಹನ್ ಕೆ ಎನ್ ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಸೂರಜ್ ಕುಮಾರ್ ಶೆಟ್ಟಿ ಬಿ ವಂದಿಸಿ, ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು.






