ಸಾಂಸ್ಕೃತಿಕ
ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!
Views: 47
ಕನ್ನಡ ಕರಾವಳಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ವಿಚಾರಣೆ ಎದುರಿಸುತ್ತಿವೆ. ಇನ್ನು ದರ್ಶನ್ ಅಭಿನಯದ ಡೆವಿಲ್ ಚಿತ್ರ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇದಕ್ಕೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಧಕ್ಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ರೇಣುಕಾಸ್ವಾಮಿ ಪೋಷಕರು ತಿಳಿಸಿದ್ದಾರೆ.






