ಯುವಜನ

ಬೆತ್ತಲೆ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ:ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ

Views: 132

ಕನ್ನಡ ಕರಾವಳಿ ಸುದ್ದಿ :ಬೆತ್ತಲೆ ಫೋಟೋ, ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆಗೆ ನೊಂದು ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.

ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ. ಮೋಹನ್ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ ಮೋಹನ್ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಮೋಹನ್ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವೀಡಿಯೋ ಕಾಲ್‌ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ.

ಬೆತ್ತಲೆ ಫೋಟೋ ಹಾಗೂ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 

Related Articles

Back to top button
error: Content is protected !!