ಮಧು ಮಕ್ಕಳಿಗೆ ಧಾರೆ ಎರೆದ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ
Views: 93
ಕನ್ನಡ ಕರಾವಳಿ ಸುದ್ದಿ: ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯ. ಮಹಿಳಾ ನಿಲಯದ ನಿವಾಸಿ ಸುಶೀಲಾ ಅವರ ವಿವಾಹವು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೃಷ್ಣಾಪುರ ಗ್ರಾಮದ ಮಲ್ಲಪ್ಪ ಅವರ ಪುತ್ರ ನಾಗರಾಜ ಅವರೊಂದಿಗೂ, ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡಿನ ಸತೀಶ್ ಪ್ರಭು ಅವರ ಪುತ್ರ ಸಂಜಯ ಪ್ರಭು ಅವರೊಂದಿಗೆ ಶುಕ್ರವಾರ ನೆರವೇರಿತು.
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ವಧುಗಳನ್ನು ಧಾರೆ ಎರೆದುಕೊಟ್ಟರು. ಡಿವೈಎಸ್‌ಪಿ ಪ್ರಭು ಡಿ.ಟಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಮತ್ತಿತರರು ಹಿರಿಯರ ಸ್ಥಾನದಲ್ಲಿ ನಿಂತು ಹರಸಿದರು.
ಮೂಲತಃ ಬಳ್ಳಾರಿ ಜಿಲ್ಲೆಯ ಮಲ್ಲೇಶ್ವರಿ ಅವರು 18 ವರ್ಷ ಪೂರ್ಣಗೊಂಡ ನಂತರ ಕಾರವಾರದ ಬಾಲಕಿಯರ ಬಾಲಮಂದಿರದಿಂದ ನಿಟ್ಟೂರಿನ ರಾಜ್ಯ ಮಹಿಳಾ ನಿಲಯಕ್ಕೆ ಬಂದಿದ್ದರು. ಸದ್ಯ ತೃತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದಾರೆ. ಸಂಜಯ್ ಪ್ರಭು ಅವರು ಎಂ.ಕಾಂ. ಪೂರೈಸಿದ್ದು, ಬೆಂಗಳೂರಿನ ಐಬಿಎಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.






