ಆರ್ಥಿಕ
ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ: ಎರಡನೇ ಆರೋಪಿ ವಶಕ್ಕೆ
Views: 168
ಕನ್ನಡ ಕರಾವಳಿ ಸುದ್ದಿ: ಸ್ಯಾಬ್ರಕಟ್ಟೆಯ ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಕಾವಡಿಯ ಹರೀಶ್ ಕುಲಾಲ್ ನನ್ನು ಕೋಟ ಪೊಲೀಸರು ಶನಿವಾರ ಬೆಂಗಳೂರಿನ ಸಮೀಪ ವಶಕ್ಕೆ ಪಡೆದಿದ್ದಾರೆ.
ಸಂಘದ ಕಾವಡಿ ಶಾಖೆ ಯಲ್ಲಿ 1 ಕೋಟಿ 70 ಲಕ್ಷ ರೂ. ಮಿಕ್ಕಿ ಹಣವನ್ನು ಪ್ರಭಾರ ಮ್ಯಾನೇಜರ್ ಸುರೇಶ್ ಭಟ್ ಹಾಗೂ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ದುರುಪಯೋಗ ಪಡಿಸಿಕೊಂಡಿರುವುದಾಗಿ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಗಳು ಕೋಟ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಮುಖ ಆರೋಪಿ ಸುರೇಶನನ್ನು ನ.19ರಂದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆತನಿಗೆ ಜಾಮೀನು ನೀಡಿತ್ತು. ಆದರೆ ಪ್ರಕರಣ ನಡೆದು ಒಂದು ತಿಂಗಳು ಕಳೆದರೂ ಎರಡನೇ ಆರೋಪಿಯ ಪತ್ತೆ ಇರಲಿಲ್ಲ. ಹೀಗಾಗಿ ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಅಸಮಾಧಾನ ವ್ಯಕ್ತವಾಗಿತ್ತು.






