ಇತರೆ

ಕೋಟ :ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ : ಓರ್ವ ಸಾವು, ನಾಲ್ವರು ವಶಕ್ಕೆ 

Views: 370

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯಲ್ಲಿ ಕೋಟ ಸಮೀಪ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.

ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ತಿಳಿದು ಬಂದಿದೆ.

ಯುವಕರು ಭಾನುವಾರ ರಾತ್ರಿ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತಪಟ್ಟಿರುವುದಾಗಿ ತಿಳಿಯಲಾಗಿದೆ.

ಘಟನಾಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರದೀಪ್, ಮತ್ತು ಅಶೋಕ್ ರವರು ಬಂದು ಪರಿಶೀಲಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!