ಇತರೆ
ಬಾವಿಯಿಂದ ನೀರು ಎತ್ತುವಾಗ ತಾಯಿ ಕೈಯಿಂದ ಜಾರಿ ಬಿದ್ದ ಮಗು ಸಾವು
Views: 259
ಕನ್ನಡ ಕರಾವಳಿ ಸುದ್ದಿ: ಬಾವಿಯಿಂದ ನೀರು ಎತ್ತು ವಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ.
ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು. ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಎತ್ತುವ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ ಮಗು ಮೃತಪಟ್ಟಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣಾ ಪಿಎಸ್ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






